ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ರಾಷ್ಟ್ರೀಯ ನಗದೀಕರಣ ಯೋಜನೆ(ಎನ್ಎಂಪಿ) ಘೋಷಿಸಿದ್ದಾರೆ. 6 ಲಕ್ಷ ಕೋಟಿ ರೂಪಾಯಿ ಮೌಲ್ಯದ ಮೂಲಸೌಕರ್ಯಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಿದ್ದು. ಈ ಪಟ್ಟಿಯಲ್ಲಿ ಪ್ರಮುಖವಾಗಿ ರಸ್ತೆಗಳು, ರೈಲ್ವೆ ಹಾಗೂ ವಿದ್ಯುತ್ ಗ್ರಿಡ್ಗಳೂ ಸೇರಿವೆ. ಆದರೆ ಭೂಮಿ ಮಾರಾಟ ಈ ಪಟ್ಟಿಯಲ್ಲಿ ಸೇರಿಲ್ಲ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರವು ರಾಷ್ಟ್ರೀಯ ನಗದೀಕರಣ ಯೋಜನೆ ಅಡಿ 2022ರ ಹಣಕಾಸು