ನವದೆಹಲಿ : ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ಕೋರಿ ಸಲಿಂಗಕಾಮಿ ದಂಪತಿ ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಅರ್ಜಿಯನ್ನು ಕೇಂದ್ರ ಸರ್ಕಾರ ವಿರೋಧಿಸಿದೆ. ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಅಫಿಡೆವಿಟ್ ಸಲ್ಲಿಸಿರುವ ಸರ್ಕಾರ ಇದನ್ನು ಭಾರತೀಯ ಕುಟುಂಬ ಘಟಕದ ಪರಿಕಲ್ಪನೆಗೆ ಹೋಲಿಸಲಾಗುವುದಿಲ್ಲ ಎಂದು ಹೇಳಿದೆ. ಸಲಿಂಗ ಸಂಬಂಧಗಳು ಕಾನೂನುಬಾಹಿರವಲ್ಲದಿದ್ದರೂ, ಭಾರತೀಯ ವ್ಯವಸ್ಥೆಯಲ್ಲಿ ಪುರುಷ ಮತ್ತು ಮಹಿಳೆಯ ನಡುವೆ ಮದುವೆ ವ್ಯವಸ್ಥೆ ಹೊಂದಿದೆ.ಸಲಿಂಗ ವ್ಯಕ್ತಿಗಳು ಪಾಲುದಾರರಾಗಿ ಒಟ್ಟಿಗೆ ವಾಸಿಸುವುದು ಮತ್ತು ಒಂದೇ ಲಿಂಗದ ವ್ಯಕ್ತಿಗಳು