ರಾಯಪುರ : ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಛತ್ತಿಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಉಪ ಕಾರ್ಯದರ್ಶಿ ಸೌಮ್ಯಾ ಚೌರಾಸಿಯಾ ಅವರನ್ನ ಶುಕ್ತವಾರ ಜಾರಿ ನಿರ್ದೇಶನಾಲಯ ಬಂಧಿಸಿದೆ. ಸೌಮ್ಯಾ ಅವರನ್ನು ಬಂಧಿಸಿದ ಬಳಿಕ ಆರೋಗ್ಯ ತಪಾಸಣೆಗೆ ಕರೆದೊಯ್ಯಲಾಯಿತು. ಕೇಂದ್ರ ಮೀಸಲು ಪೊಲೀಸ್ ಪಡೆ ಬೆಂಗಾವಲಿನಲ್ಲಿ ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು.ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ನಲ್ಲಿ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ ಭಾರತ ಆಡಳಿತ ಸೇವೆಯ ಅಧಿಕಾರಿ