ಪುಣೆ: ಮಹಾರಾಷ್ಟ್ರದ ಪ್ರಸಿದ್ಧ ಪ್ರವಾಸಿ ತಾಣವಾದ ಲೋಹಗಡ್ ಕೋಟೆಯಲ್ಲಿ ನಡೆದ ಯುವಕ ಕೇತನ್ ಅಗರ್ವಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪಣೆ ಪಟ್ಟಿ (ಚಾರ್ಜ್ಶೀಟ್) ಯಲ್ಲಿ ಹಲವು ಆಘಾತಕಾರಿ ಹಾಗೂ ಬೆಚ್ಚಿಬೀಳಿಸುವ ಸಂಗತಿಗಳು ಹೊರಬಿದ್ದಿವೆ. ಆರೋಪಿ ಸಿಯಾ ಗೋಯಲ್, ಕೇತನ್ನನ್ನು ಪ್ರಪಾತಕ್ಕೆ ತಳ್ಳುವ ಮುನ್ನ ಆತನ ಪೋಟೋ ತೆಗೆದಿದ್ದಲ್ಲದೆ, ಕೊಲೆಯ ನಂತರ ಪೊಲೀಸರಿಂದ ಹೇಗೆ ಬಚಾವಾಗುವುದು ಎಂದು ‘ChatGPT’ ನಂತಹ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದಲ್ಲಿ ಹುಡುಕಾಟ