ಚೆನ್ನೈ : ಕ್ರಿಶ್ಚಿಯನ್ ಧರ್ಮವನ್ನು ಪ್ರಚಾರ ಮಾಡುವ ಮಿಷನರಿಗಳು ಕಾನೂನುಬಾಹಿರ ಅಥವಾ ಅಸಾಂವಿಧಾನಿಕವಲ್ಲ ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದೆ. ಸಂವಿಧಾನದ 25ನೇ ವಿಧಿಯು ಪ್ರತಿಯೊಬ್ಬ ವ್ಯಕ್ತಿಗೂ ತನ್ನ ಧಾರ್ಮಿಕ ನಂಬಿಕೆಯನ್ನು ಪ್ರಚಾರ ಮಾಡುವ ಮತ್ತು ಇತರರಿಗೆ ಬೋಧಿಸುವ ಹಕ್ಕನ್ನು ನೀಡುತ್ತದೆ. ಮಿಷನರಿಗಳು ಸಾರ್ವಜನಿಕ ಸುವ್ಯವಸ್ಥೆ ಅಥವಾ ನೈತಿಕತೆಯ ವಿರುದ್ಧವಾಗಿಲ್ಲ. ಆದರೆ ಬೆದರಿಕೆ, ವಂಚನೆ, ಉಡುಗೊರೆಗಳ ಮೂಲಕ, ಮಾಟಮಂತ್ರ ಅಥವಾ ಮೂಢನಂಬಿಕೆಯ ಮೂಲಕ ಆಮಿಷ ಒಡ್ಡುವ