ಹೊಸದಿಲ್ಲಿ: ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಮೂಲ ಸೌಕರ್ಯಗಳ ಕೊರತೆಯ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ದನಿಯೆತ್ತಿದ್ದಾರೆ. ಹೊಸದಿಲ್ಲಿಯಲ್ಲಿ ನಡೆದ ಸಮಾರಂಭವೊಂದರಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರ ಸಮ್ಮುಖದಲ್ಲೇ ಈ ವಿಚಾರವನ್ನು ಅವರು ಪ್ರಸ್ತಾವಿಸಿದ್ದಾರೆ. ಸೌಕರ್ಯಗಳನ್ನು ಕಲ್ಪಿಸುವ ವಿಚಾರ ಯಾವತ್ತಿಗೂ ನಿರ್ಲಕ್ಷಿತ ವಿಚಾರವಾಗಿಯೇ ಉಳಿದಿದೆ. ಇಂಥ ಮನಃಸ್ಥಿತಿಗಳಿಂದಾಗಿ, ದೇಶದ ನ್ಯಾಯಾಲಯಗಳು ಶಿಥಿಲಗೊಂಡಿರುವ ವ್ಯವಸ್ಥೆಗಳಡಿ ಕಾರ್ಯ ನಿರ್ವಹಿಸುತ್ತಿವೆ. ಇದರಿಂದಾಗಿ, ನ್ಯಾಯಾಲಯಗಳು ಪರಿಣಾಮಕಾರಿಯಾಗಿ ಕೆಲಸ ಮಾಡಲು ಕಷ್ಟವಾಗುತ್ತಿದೆ’