ಶಿಮ್ಲಾ : ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, 7 ಜನರು ಬಲಿಯಾಗಿರುವ ಘಟನೆ ನಡೆದಿದೆ. ಸೋಲನ್ನ ಕಂದಘಾಟ್ನ ಜಾಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ ನಂತರ ಐವರನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ ಒಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2 ಮನೆಗಳು ಹಾಗೂ ಒಂದು ದನದ ಕೊಟ್ಟಿಗೆ ಕೊಚ್ಚಿಕೊಂಡು ಹೋಗಿರುವುದಾಗಿ ವರದಿಯಾಗಿದೆ.ದುರ್ಘಟನೆ ಬಳಿಕ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಟ್ವಿಟ್ಟರ್ನಲ್ಲಿ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ