ಬೆಂಗಳೂರು: ಚೆನ್ನೈ ಸೇರಿದಂತೆ ಕರಾವಳಿಯ ಕೆಲವು ನಗರಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಬಂಗಾಳ ಕೊಲ್ಲಿಯಲ್ಲಿ ಬಿರುಗಾಳಿ ಏಳುವ ಸಾಧ್ಯತೆಯಿರುವುದರಿಂದ ವಾತಾವರಣದಲ್ಲಿ ಈ ಬದಲಾವಣೆಯಾಗಲಿದ್ದು, ಇದರಿಂದಾಗಿ ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ ಎರಡರಿಂದ ಮೂರು ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ ಎನ್ನಲಾಗಿದೆ.ಶುಕ್ರವಾರದವರೆಗೆ ಚೆನ್ನೈ ಮತ್ತಿತರೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಎರಡು ವಾರಗಳ ಹಿಂದೆ ಬೆಂಗಳೂರಿನಲ್ಲಿ ಭಾರೀ