ಜಾರ್ಖಂಡ್ ಮುಖ್ಯಮಂತ್ರಿ ರಘುಭರ್ ದಾಸ್ ಸಂದರ್ಶನ ಮಾಡುತ್ತಿದ್ದ ವರದಿಗಾರ್ತಿಯೊಬ್ಬಳು ದುರ್ವಾಸನೆ ತಾಳದೆ ಮೂಗು ಮುಚ್ಚಿಕೊಂಡ ವಿಡಿಯೋ ಇದೀಗ ವೈರಲ್ ಆಗಿದೆ. ಮುಖ್ಯಮಂತ್ರಿ ರಘುಭರ್ ದಾಸ್ ಪತ್ರಿಕಾ ಸಂದರ್ಶನದಲ್ಲಿ ಪಾಲ್ಗೊಂಡಿದ್ದಾಗ ಕಂಠಪೂರ್ತಿ ಮದ್ಯ ಸೇವಿಸಿದ್ದರು ಎನ್ನಲಾಗಿದೆ. ಇದರಿಂದ ವರದಿಗಾರ್ತಿ ದುರ್ವಾಸನೆ ತಾಳದೆ ಮೂಗು ಮುಚ್ಚಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ಫೇಸಬುಕ್ ಮತ್ತು ಟ್ವಿಟ್ಟರ್ನಲ್ಲಿ ವಿಡಿಯೋ ಶೇರ್ ಮಾಡಿದ ಬಳಕೆದಾರರು, ಮುಖ್ಯಮಂತ್ರಿ ವರ್ತನೆಯನ್ನು ಗುರಿಯಾಗಿಸಿಕೊಂಡು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಸತ್ಯ ಏನು?