ನವದೆಹಲಿ: ದೆಹಲಿ ಸಿಎಂ ಕೇಜ್ರಿವಾಲ್ ರ ಮೇಲೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಮಾನ ನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿ ವಿಚಾರಣೆ ನ್ಯಾಯಾಲಯದಲ್ಲಿದೆ. ಆದರೆ ಇದರ ವಿಚಾರಣೆಗಾಗಿ ಕೇಜ್ರಿವಾಲ್ ಗೆ ವಕೀಲ ರಾಮ್ ಜೇಠ್ಮಲಾನಿಗೆ ಕೊಡಬೇಕಿರುವ 3 ಕೋಟಿ ಮೊತ್ತದ ಬಿಲ್ ಗೆ ಸರ್ಕಾರದ ಹಣ ಬಳಸಿಕೊಳ್ಳಲು ಮುಂದಾಗಿದ್ದಾರೆಂಬ ವಿವಾದವೆಬ್ಬಿದೆ. ಐಟಿ ದಾಳಿಗೆ ಸಂಬಂಧಿಸಿದಂತೆ ಕೇಜ್ರಿವಾಲ್ ವಿರುದ್ಧ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಮಾನ ನಷ್ಟ ಮೊಕದ್ದಮೆ ಹೂಡಿದ್ದರು.