ಕೋಲ್ಕತ್ತಾ : ಕಮಿಷನರ್ ವಿಚಾರಣೆಗೆ ಬಂದ ಸಿಬಿಐ ಅಧಿಕಾರಿಗಳನ್ನು ಪೊಲೀಸರು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸಿದ್ದಾರೆ. ಚಿಟ್ ಫಂಡ್ ಹಗರಣದಲ್ಲಿ ಕೋಲ್ಕತ್ತ ನಗರ ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ಅವರ ವಿಚಾರಣೆಗೆಂದು ಭಾನುವಾರ ಅವರ ನಿವಾಸಕ್ಕೆ ತೆರಳಿದ್ದ ಸಿಬಿಐ ಅಧಿಕಾರಿಗಳನ್ನೇ ಪೊಲೀಸರು ವಶಕ್ಕೆ ಪಡೆದಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ವಿರುದ್ದ ಕಿಡಿಕಾರಿದ