ಇತ್ತೀಚಿನ ದಿನಗಳಲ್ಲಿ ನಟ ಯಶ್ ಅವರು ರಾಜಕೀಯಕ್ಕೆ ಬರುತ್ತಾರೆ ಎನ್ನುವ ಕುರಿತು ಭಾರೀ ಚರ್ಚೆ ಆಗುತ್ತಿದೆ.ಅವರು ಈ ಕುರಿತು ಎಲ್ಲಿಯೂ ಹೇಳಿಕೆ ನೀಡದೇ ಇದ್ದರೂ, ಅವರ ನಡೆಗಳು ಇಂಥದ್ದೊಂದು ಪ್ರಶ್ನೆಯನ್ನು ಹುಟ್ಟು ಹಾಕುತ್ತಿವೆ. ಕಳೆದ ಐದಾರು ವರ್ಷಗಳಿಂದ ರಾಕಿಭಾಯ್ ಹತ್ತು ಹಲವು ಜನಪರ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕದ ಅನೇಕ ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಕೆರೆಗಳನ್ನು ಸಂರಕ್ಷಿಸಿದ್ದಾರೆ. ಹೀಗಾಗಿ ಅವರಿಗೆ ಜನಪರ ಕೆಲಸ ಮಾಡುವ