ತಿರುವನಂತಪುರಂ: ಕೇರಳ ಪ್ರವಾಸದಲ್ಲಿದ್ದಾಗ ಅಲ್ಲಿನ ಸಿಪಿಐ ಎಂ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಗೆ ಸಿಎಂ ಪಿಣರಾಯಿ ವಿಜಯನ್ ತಿರುಗೇಟು ನೀಡಿದ್ದಾರೆ.ನಿಮ್ಮಂಥವರಿಗೆ ಇಲ್ಲಿ ಜಾಗವಿಲ್ಲ. ನಮ್ಮ ಸುಭದ್ರ ಸರ್ಕಾರ ಉರುಳಿಸಲು ನಿಮ್ಮ ಬಲ ಸಾಕಾಗಲ್ಲ ಎಂದು ಸಿಎಂ ಪಿಣರಾಯಿ ವಿಜಯನ್ ಅಮಿತ್ ಶಾಗೆ ತಿರುಗೇಟು ನೀಡಿದ್ದಾರೆ.ಕೇರಳ ಸರ್ಕಾರ ಶಬರಿಮಲೆ ವಿಚಾರದಲ್ಲಿ ಹಿಂದೂಗಳ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಅಮಿತ್ ಶಾ ವಾಗ್ದಾಳಿ ನಡೆಸಿದ್ದರು.