ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ರೈಲ್ವೆ ಸಚಿವ ಸುರೇಶ್ ಪ್ರಭು ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಳೆದ ಐದು ವರ್ಷದಲ್ಲಿ ಎಸ್ಟಿಆರ್ಎಫ್ ಕಡೆಯಿಂದ 1527 ಕೋಟಿ ರೂ. ನೀಡಲಾಗಿದೆ. ನಮ್ಮ ಮಾದರಿಯಲ್ಲೇ ಇರುವ ಮಹಾರಾಷ್ಟ್ರಕ್ಕೆ 8 ಸಾವಿರ ಕೋಟಿ ರೂ. ನೀಡಲಾಗಿದೆ. ಆಂಧ್ರ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶಕ್ಕೆ ಹೆಚ್ಚು ಹಣ ನೀಡಲಾಗಿದೆ.