ಉಪಚುನಾವಣೆಯ ಗೆಲುವಿನ ಬಳಿಕ ಸಿಎಂ ಸಿದ್ದರಾಮಯ್ಯ ಅಂಡ್ ಟೀಮ್ ದಿಲ್ಲಿಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿದೆ. ದೆಹಲಿಯ ತುಘಲಕ್ ಲೇನ್`ನಲ್ಲಿರುವ ರಾಹುಲ್ ಗಾಂಧಿ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಸಿಎಂಗೆ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸಾಥ್ ನೀಡಿದ್ದಾರೆ.