ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಬಲವಾದ ಕಾನೂನಿನ ಅಗತ್ಯವಿದೆ. ಮಹಿಳೆಯರಿಗೆ ತೊಂದರೆ ಕೊಡುವ ಯಾರೇ ಆದರೂ ಅಂತವರನ್ನು ಸುಮ್ಮನೆ ಬಿಡಲು ಸಾಧ್ಯವಿಲ್ಲ. ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರಿಗಾಗಿ ಯಮರಾಜ ಕಾಯುತ್ತಿದ್ದಾನೆ ಎಂದು ಕಿಡೆಗೇಡಿಗಳಿಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಗಳ