ಲಕ್ನೋ : ಆಲೂಗಡ್ಡೆ ಕೋಲ್ಡ್ ಸ್ಟೋರೇಜ್ನ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಸಂಭಾಲ್ ಚಂದೌಸಿ ಪ್ರದೇಶದಲ್ಲಿ ನಡೆದಿದೆ. ಆಲೂಗಡ್ಡೆ ಕೋಲ್ಡ್ ಸ್ಟೋರೇಜ್ನ ಮಾಲೀಕರನ್ನು ಅಂಕುರ್ ಅಗರ್ವಾಲ್ ಮತ್ತು ರೋಹಿತ್ ಅಗರ್ವಾಲ್ ಎಂದು ಗುರುತಿಸಲಾಗಿದ್ದು, ಘಟನೆಗೆ ಸಂಬಂಧಿಸಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಈ ಹಿಂದೆಯೇ ಕೋಲ್ಡ್ ಸ್ಟೋರೇಜ್ ಶಿಥಿಲಾವಸ್ಥೆಯಲ್ಲಿದೆ ಎಂದು ವರದಿಯಾಗಿತ್ತು. ಆದರೆ ಕಟ್ಟಡ ಕುಸಿತಕ್ಕೆ ನಿಜವಾದ ಕಾರಣ ಇನ್ನೂ