ನವದೆಹಲಿ: ಯುವತಿಯ ಹೆಸರಿನಲ್ಲಿ ನಕಲಿ ಇನ್ ಸ್ಟಾಗ್ರಾಂ ಖಾತೆ ತೆರೆದು ಅಶ್ಲೀಲ ವಿಡಿಯೋಗಳನ್ನು ಪ್ರಕಟಿಸಿ ಕಿರುಕುಳ ನೀಡುತ್ತಿದ್ದ ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಯುವತಿಯ ಹೆಸರಿನಲ್ಲಿ ನಕಲಿ ಖಾತೆ ತೆರೆದಿದ್ದಲ್ಲದೆ, ಆಕೆಯ ಫೋನ್ ನಂಬರ್ ನ್ನೂ ಕೂಡಾ ಆತ ಬಹಿರಂಗಪಡಿಸಿದ್ದ. ಇದರಿಂದಾಗಿ ಯುವತಿಗೆ ಅಶ್ಲೀಲ ಫೋನ್ ಕರೆಗಳು ಬರಲಾರಂಭಿಸಿದ್ದವು. ಆಗ ಆಕೆ ಸೈಬರ್ ಪೊಲೀಸರಿಗೆ ದೂರು ನೀಡಿದ್ದಳು.ಅದರಂತೆ ಪೊಲೀಸರು ಯುವಕನನ್ನು ಅರೆಸ್ಟ್ ಮಾಡಿದ್ದಾರೆ. ವಿಚಾರಣೆ ವೇಳೆ ತನ್ನ ಗರ್ಲ್ ಫ್ರೆಂಡ್ ಜೊತೆ