ಬೆಂಗಳೂರು, ಸೆ.30 : ಸಿಂಧಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಯ ಪೈಕಿ ಹಾನಗಲ್ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲವಾಗಿದ್ದು, ಎರಡು ಬಣಗಳ ನಡುವೆ ಪೈಪೋಟಿ ಶುರುವಾಗಿದೆ. ಸಿಂಧಗಿ ಕ್ಷೇತ್ರಕ್ಕೆ ಎಂ.ಸಿ.ಮನಗೋಳಿ ಅವರ ಪುತ್ರ ಅಶೋಕ್ ಮನಗೋಳಿ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ. ಆ ಕ್ಷೇತ್ರದಲ್ಲಿ ಕಾಂಗ್ರೆಸ್ ಒಳವಲಯದಲ್ಲಿ ಅಸಮದಾನಗಳಿದ್ದರೂ ಪಕ್ಷದ ವರಿಷ್ಠ ನಾಯಕರ ನಿರ್ಧಾರಕ್ಕೆ ಎಲ್ಲರೂ ಸಹಿಸಿಕೊಂಡಿದ್ದಾರೆ ಎನ್ನಲಾಗಿದೆ. ಹಾನಗಲ್ ಕ್ಷೇತ್ರದಲ್ಲಿ ಟಿಕೆಟ್ಗಾಗಿ ಇಬ್ಬರು ನಾಯಕರ ನಡುವೆ ಸ್ಪರ್ಧೆ