ನವದೆಹಲಿ : ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ(ಜೆಎನ್ಯು) ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ನಡುವೆ ವಿದ್ಯಾರ್ಥಿವೇತನ ವಿಚಾರವಾಗಿ ಘರ್ಷಣೆ ಉಂಟಾಗಿದೆ.ಘಟನೆಯಲ್ಲಿ 6 ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ. ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ) ವಿದ್ಯಾರ್ಥಿಗಳ ಗುಂಪು ಇಂದು 2 ವರ್ಷಗಳಿಂದ ತಡೆಹಿಡಿಯಲಾದ ವಿದ್ಯಾರ್ಥಿವೇತನದ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದು, ಈ ವೇಳೆ ಸಂಸ್ಥೆಯ ಭದ್ರತಾ ಸಿಬ್ಬಂದಿ ತಮ್ಮ ಮೇಲೆ ದಾಳಿ ನಡೆಸಿರುವುದಾಗಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.ವಿದ್ಯಾರ್ಥಿವೇತನದ ಬಗ್ಗೆ ವಿಚಾರಿಸಲು ಬೆಳಗ್ಗೆ 11 ಗಂಟೆಗೆ 5