ನವದೆಹಲಿ: ಗುಜರಾತ್ ಚುನಾವಣೆಯಲ್ಲಿ ಇದುವರೆಗಿನ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಗಳಿಸಿರಬಹುದು. ಹಾಗಿದ್ದರೂ ಕಾಂಗ್ರೆಸ್ ಗೆ ಸಮಾಧಾನ ತರುವ ವಿಚಾರವೊಂದು ಹೊರಬಂದಿದೆ. ಕಾಂಗ್ರೆಸ್ ಕಳೆದ ಬಾರಿಯ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ ಈ ಬಾರಿ ಕೊಂಚ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದು ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಗೆ ಶುಭ ಸೂಚನೆಯಾಗಲಿದೆ.ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಕಾಂಗ್ರೆಸ್ ಸುಮಾರು 16 ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ