ಬೆಂಗಳೂರು : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಕರೆಯ ಮೇರೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಕ್ಟೋಬರ್ 5 ರಂದು ದೆಹಲಿಗೆ ತೆರಳಲಿದ್ದಾರೆಂದು ತಿಳಿದುಬಂದಿದೆ. ಇಂದು ಮಧ್ಯಾಹ್ನ 12.30ಕ್ಕೆ ಸೋನಿಯಾ ಅವರ ನಿವಾಸದಲ್ಲಿ ನಡೆಯಲಿರುವ ಸಭೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಹೀಗಾಗಿ, ಬೆಳಿಗ್ಗೆ 7.30ರ ವಿಮಾನದಲ್ಲಿ ಬೆಂಗಳೂರಿನಿಂದ ತೆರಳಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ದೆಹಲಿಗೆ ಬರುವಂತೆ ಸೋನಿಯಾ ಗಾಂಧಿ ಅವರಿಂದ ದಿಢೀರ್ ಆಹ್ವಾನ ಬಂದಿದೆ.