ಪಣಜಿ : ಶಾಸಕ ದಿಗಂಬರ್ ಕಾಮತ್ ಅವರ ನೇತೃತ್ವದಲ್ಲಿ ಗೋವಾದ ಕಾಂಗ್ರೆಸ್ ಶಾಸಕರು ಬಂಡಾಯ ಏಳುವ ಅಂಚಿನಲ್ಲಿದ್ದು, ಕನಿಷ್ಠ 6 ರಿಂದ 10 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.ಈ ನಡುವೆ ಕಾಂಗ್ರೆಸ್ ಶಾಸಕ ಮೈಕಲ್ ಲೋಬೋ, ತಾನು ಬಿಜೆಪಿ ಸೇರುವುದಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ.ಬಿಜೆಪಿಯು ಕಾಂಗ್ರೆಸ್ ಶಾಸಕರಲ್ಲಿ ಗೊಂದಲ ಸೃಷ್ಟಿಸಿ ವದಂತಿ ಹಬ್ಬಿಸುತ್ತಿದೆ. ನಾನು ನನ್ನ ಮನೆಯಲ್ಲಿ ಕುಳಿತಿದ್ದೇನೆ. ಈ ಮಾತುಕತೆಗಳಲ್ಲಿ ಯಾವುದೇ ಸತ್ಯವಿಲ್ಲ.