ದೇಶದ ನ್ಯಾಯಾಂಗದಲ್ಲಿ ಉಂಟಾಗಿರುವ ಬಿರುಕು ಸರಿಪಡಿಸಲು ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿ ಮಧ್ಯ ಪ್ರವೇಶಿಸಬೇಕು ಎಂದು ಕಾಂಗ್ರೆಸ್ ಸಂಸದ ಎಸ್.ಪಿ.ಮುದ್ದಹನುಮೇಗೌಡ ಒತ್ತಾಯಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿ ವಿರುದ್ಧ ನಾಲ್ವರು ನ್ಯಾಯಾಧೀಶರು ಆಕ್ರೋಶ ವ್ಯಕ್ತಪಡಿಸಿರುವ ಘಟನೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ಈ ಘಟನೆಯಿಂದ ದೇಶದ ಜನರ ಭಾವನೆಗೆ ಧಕ್ಕೆಯಾಗಿದೆ. ಈ ಬೆಳವಣಿಗೆ ಮಾರಕವಾದ ಬೆಳವಣಿಗೆಯಾಗಿದೆ. ನ್ಯಾಯಾಂಗ ತೊಂದರೆಯಲ್ಲಿದ್ದಾಗ ಕಾರ್ಯಾಂಗ ಮತ್ತು ಶಾಸಕಾಂಗ