ನವದೆಹಲಿ : ಭಾರತದ ಆರ್ಥಿಕತೆ ವಿಚಾರದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸ್ವಂತ ನಿರ್ಧಾರ ತೆಗೆದುಕೊಳ್ಳಲು ಬಿಜೆಪಿಯವರು ಬಿಡದ ಕಾರಣ ಕಾಂಗ್ರೆಸ್ ನಾಯಕರು ಅವರನನ್ನು ನಿರ್ಬಲ ಸೀತಾರಾಮನ್ ಎಂದು ಲೇವಡಿ ಮಾಡಿದ್ದಾರೆ.ಸೋಮವಾರದ ನಡೆದ ಲೋಕಸಭಾ ಅಧಿವೇಶನದಲ್ಲಿ ತೆರಿಗೆ ಕಾನೂನು ಮಸೂದೆಯ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ಮಾತನಾಡಿದ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ನಿರ್ಬಲ ಸೀತಾರಾಮನ್ ಎಂದು ಕರೆದು ಲೇವಡಿ ಮಾಡಿದ್ದಾರೆ.