ಮುಂಬೈ : ತೀವ್ರವಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಿನಿಮಾ ಮಂದಿರಗಳು, ಮಲ್ಟಿಪ್ಲೆಕ್ಸ್ಗಳು, ಆಡಿಟೋರಿಯಂಗಳ ಪುನರಾರಂಭಕ್ಕೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ನ ಮುಂಬೈ ಘಟಕ ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಿದೆ. ಇದೇ ವೇಳೆ, ಈಜುಕೊಳಗಳನ್ನು ತೆರೆಯುವ ಮೂಲಕ, ಪಂದ್ಯಗಳಲ್ಲಿ ಪಾಲ್ಗೊಳ್ಳುವ ವೃತ್ತಿಪರ ಈಜು ಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಘಟಕದ ಮುಖ್ಯಸ್ಥರು ಆಗ್ರಹಿಸಿದ್ದಾರೆ. ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಂಬೈನ ಕಾಂಗ್ರೆಸ್ ಘಟಕದ ಮುಖ್ಯಸ್ಥ ಭಾಯ್ ಜಗತಾಪ್, ಸುಮಾರು ಹದಿನೆಂಟು