ನವದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಪ್ರಕಟವಾದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಬಲಿಷ್ಠವಾಗಿದ್ದು, ಪಕ್ಷದ ಬಲ ಹೆಚ್ಚಿಸಿಕೊಳ್ಳಲು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರ ಸೇರಿದಂತೆ ಪಕ್ಷದ ಹಿರಿಯ ನಾಯಕರು ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ. ಅಲ್ಲದೇ ಗೆಲ್ಲುವ ಅಭ್ಯರ್ಥಿಗಳ