ಕೊಲ್ಕತ್ತಾ : ಈ ತಿಂಗಳ ಕೊನೆಗೆ ನಡೆಯುವ ಭವಾನಿಪುರ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಿಲ್ಲ ಎಂದು ಕಾಂಗ್ರೆಸ್ ಪಕ್ಷ ಪ್ರಕಟಿಸಿದೆ. ಈ ಮೂಲಕ ಈ ಸಂಬಂಧ ಇದ್ದ ಎಲ್ಲ ವದಂತಿಗಳಿಗೆ ತೆರೆ ಬಿದ್ದಂತಾಗಿದೆ. ಬ್ಯಾನರ್ಜಿ ವಿರುದ್ಧ ತಮ್ಮ ಪಕ್ಷ ಪ್ರಚಾರ ಮಾಡುವುದೂ ಇಲ್ಲ ಎಂದು ಸ್ಪಷ್ಟಪಡಿಸಿದೆ. ಆದರೆ ಕಾಂಗ್ರೆಸ್ನ ಮಿತ್ರ ಪಕ್ಷವಾಗಿರುವ ಎಡರಂಗ ಕಾಂಗ್ರೆಸ್ ನಿರ್ಧಾರದ ಬಗ್ಗೆ ಇನ್ನೂ