ಭೋಪಾಲ್ : ಮೊಟ್ಟೆ, ಮಾಂಸ ತಿನ್ನುವ ಮಕ್ಕಳು ನರಭಕ್ಷಕರಾಗುತ್ತಾರೆ ಎಂದು ಮಧ್ಯಪ್ರದೇಶದ ಬಿಜೆಪಿ ನಾಯಕ ಗೋಪಾಲ ಭಾರ್ಗವ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಮಕ್ಕಳಿಗೆ ಪೌಷ್ಟಿಕಾಂಶ ಒದಗಿಸುವ ನಿಟ್ಟಿನಲ್ಲಿ ಅಂಗನವಾಡಿ ಮಕ್ಕಳಿಗೆ ಆಹಾರದ ಜೊತೆಗೆ ಮೊಟ್ಟೆಗಳನ್ನು ನೀಡುವ ಬಗ್ಗೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಇಮಾರ್ತಿ ದೇವಿ ನಿರ್ಧರಿಸಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದು, ಈ ವೇಳೆ ಬಿಜೆಪಿ ನಾಯಕ ಗೋಪಾಲ ಭಾರ್ಗವ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.