ಲಕ್ನೋ : ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಮದುವೆಯಾಗಲು ನಿರಾಕರಿಸಿ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದು, ಆರೋಪಿಯನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದಾರೆ.ಆರೋಪಿಯನ್ನು ಶಾರುಖ್ (24) ಎಂದು ಗುರುತಿಸಲಾಗಿದೆ. ಆರೋಪಿ ಆತ್ಮಹತ್ಯೆಗೆ ಶರಣಾದ ಯುವತಿಯೊಂದಿಗೆ ಸಂಬಂಧ ಹೊಂದಿದ್ದು, ಸಾಮಾಜಿಕ ಅವಮಾನದಿಂದ ತಪ್ಪಿಸಿಕೊಳ್ಳಲು ಆಕೆಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಪೀಡಿಸುತ್ತಿದ್ದ.ಅಷ್ಟೇ ಅಲ್ಲದೇ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳದೇ ಹೋದರೆ ಸಾಯಬೇಕು ಎಂದು ಷರತ್ತನ್ನೂ ವಿಧಿಸಿದ್ದ. ಇದರಿಂದ ಬೇಸತ್ತ ಯುವತಿ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ