ಕೊರೊನಾ ಈಗ ಅತ್ಯಂತ ವೇಗವಾಗಿ ಹರಡುತ್ತಿದೆ. ಆಸ್ಪತ್ರೆಗಳಲ್ಲಿ ಸಾಲುಸಾಲಾಗಿ ವೈದ್ಯರಲ್ಲಿ ಕಾಣಿಸಿಕೊಳ್ಳುತ್ತಿದೆ.ಕಾಲೇಜು, ಶಿಕ್ಷಣಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು, ಅಧ್ಯಾಪಕರಿಗೆ ತಗುಲಿದೆ. ಅದೆಷ್ಟೋ ರಾಜಕಾರಣಿಗಳು ಕೊರೊನಾಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಹಾಗೇ, ನ್ಯಾಯಾಲಯಗಳಲ್ಲಿ ಜಡ್ಜ್ಗಳು, ವಕೀಲರಲ್ಲಿ ಕೂಡ ಕೊವಿಡ್ ಕಾಣಿಸಿಕೊಂಡಿದೆ. ಎಲ್ಲ ಕಡೆಗಳಲ್ಲೂ 100-150ರ ಸಂಖ್ಯೆಯ ಲೆಕ್ಕದಲ್ಲೇ ಕಾಣಿಸಿಕೊಳ್ಳುತ್ತಿದೆ. ಹಾಗೇ, ಇದೀಗ ದೆಹಲಿಯಲ್ಲಿರುವ ಬಿಜೆಪಿ ಪ್ರಧಾನಕಚೇರಿ 42 ಸಿಬ್ಬಂದಿಯಲ್ಲಿ ಕೊರೊನಾ ದೃಢಪಟ್ಟಿದೆ.ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಸಂಬಂಧ ಬಿಜೆಪಿ ಕಚೇರಿಯಲ್ಲಿ ಸಭೆ ನಡೆದಿತ್ತು. ಅದರ ಹಿನ್ನೆಲೆಯಲ್ಲಿ