ನವದೆಹಲಿ(ಅ.04): ಕೋವಿಡ್ ನಿಯಂತ್ರಣ ಮತ್ತು ಲಸಿಕೆ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದ ಸಾಧನೆ ಏನೆಂದು ತಿಳಿಸುವ ಕಿರು ಪುಸ್ತಕವೊಂದನ್ನು ಮಂಗಳವಾರ ಬಿಜೆಪಿ ಸಂಸದರಿಗೆ ನೀಡಲಾಯಿತು. ಕೊರೋನಾ ನಿಗ್ರಹ ವಿಚಾರದಲ್ಲಿ ಕೇಂದ್ರ ಸರ್ಕಾರ ದಿವ್ಯ ನಿರ್ಲಕ್ಷ್ಯ ವಹಿಸಿದೆ, ಚುನಾವಣಾ ರಾಜ್ಯಗಳ ಪರವಾಗಿ ಕೆಲಸ ಮಾಡಿದೆ ಎಂದು ವಿಪಕ್ಷಗಳು ಟೀಕಿಸಿದ್ದವು. ಅದರ ಬೆನ್ನಲ್ಲೇ ಸರ್ಕಾರದ ಸಾಧನೆ ವಿವರಿಸುವ ಪುಸ್ತಕ ಬಿಡುಗಡೆ ಮಾಡಿ ಮಾಹಿತಿ ನೀಡಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈ