Normal 0 false false false EN-US X-NONE X-NONE ನವದೆಹಲಿ : ದೇಶದಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮುಂದುವರಿಸಿದ್ದು, ಇದೀಗ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 42,533ಕ್ಕೆ ಏರಿಕೆಯಾಗಿದೆ. ಈಗಾಗಲೇ ಕೊರೊನಾ ಹೆಮ್ಮಾರಿಗೆ ಭಾರತದಲ್ಲಿ 1,373 ಜನರು ಬಲಿಯಾಗಿದ್ದಾರೆ. ಅಲ್ಲದೇ ಈವರೆಗೆ 11,707 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 29,453 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.