ಶ್ರೀನಗರ : ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿದ ಹಾಗೂ 15 ಜನರು ಗಾಯಗೊಂಡಿರುವ ಘಟನೆ ಜಮ್ಮುವಿನ ರೆಸಿಡೆನ್ಸಿ ರಸ್ತೆಯಲ್ಲಿ ನಡೆದಿದೆ.ಜಮ್ಮುವಿನ ರೆಸಿಡೆನ್ಸಿ ರಸ್ತೆಯಲ್ಲಿರುವ ಸ್ಕ್ರ್ಯಾಪ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಅಂಗಡಿಯಲ್ಲಿ ಎಲ್ಪಿಜಿ ಸಿಲಿಂಡರ್ಗಳನ್ನು ಅಂಗಡಿಯೊಳಗೆ ಇಡಲಾಗಿತ್ತು. ಇದರಿಂದಾಗಿ ಪಕ್ಕದ ಕಟ್ಟಡಗಳಿಗೆ ವ್ಯಾಪಿಸಿದೆ.ಈ ಬಗ್ಗೆ ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಮಾತನಾಡಿ, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ನಾಲ್ಕು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ