ನವದೆಹಲಿ : ಪೌರತ್ವ ತಿದ್ದುಪಡಿ ಕಾಯಿದೆ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಡಿಸೆಂಬರ್ 6 ರಿಂದ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ತಿಳಿಸಿದ್ದಾರೆ.ಇಂದು ಪ್ರಕರಣದ ವಿಚಾರಣೆ ನಡೆಸಿದ ಅವರ ನೇತೃತ್ವದ ಪೀಠ ಇಬ್ಬರು ನೋಡಲ್ ಸಲಹೆಗಾರರನ್ನು ನೇಮಿಸಿದೆ.ಪ್ರಕರಣ ಸಂಬಂಧ ಅಸ್ಸಾಂ, ತ್ರಿಪುರ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಿಂದ 232 ಅರ್ಜಿಗಳು ಸಲ್ಲಿಕೆಯಾಗಿದ್ದವು. ಇವುಗಳನ್ನು ಒಟ್ಟುಗೂಡಿಸಿ ವಿಚಾರಣೆ ನಡೆಸಲು ತಿರ್ಮಾನಿಸಿರುವ ಕೋರ್ಟ್ ಅರ್ಜಿಗಳ