ದಲಿತ ಯುವಕರ ಮೇಲೆ ನಡೆದ ದೌರ್ಜನ್ಯ ಘಟನೆ ವಿರೋಧಿಸಿ ದಲಿತ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆಯ ಕಾವು ರಾಜ್ಯಾದ್ಯಂತ ವಿಸ್ತರಿಸುತ್ತಿದೆ. ಅಹ್ಮದಾಬಾದ್ನಲ್ಲಿ ದಲಿತರ ಪ್ರತಿಭಟನೆ ಸಂದರ್ಭದಲ್ಲಿ ಕಲ್ಲು ತೂರಾಟದಲ್ಲಿ ಪೊಲೀಸ್ ಪೇದೆ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಕಳೆದ ಜುಲೈ 11 ರಂದು ಗಿರ್-ಸೋಮನಾಥ್ ಜಿಲ್ಲೆಯಲ್ಲಿ ಗೋವುಗಳನ್ನು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ಕೆಲ ಯುವಕರು ದಲಿತ ಸಮುದಾಯದ ಕೆಲ ಯುವಕರ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ದಲಿತ ಸಮುದಾಯ ಪ್ರತಿಭಟನೆ