ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ದೆಹಲಿಯಲ್ಲಿ ನಡೆಯುತ್ತಿದ್ದು, ಅಧ್ಯಕ್ಷ ಪಟ್ಟಕ್ಕೆ ಆಂತರಿಕ ಚುನಾವಣೆ ನಡೆಯುವ ದಿನಾಂಕ ಪ್ರಕಟವಾಗಿದೆ. ದೆಹಲಿಯ ಸೋನಿಯಾ ಗಾಂಧಿ ನಿವಾಸದಲ್ಲಿ ಸಭೆ ನಡೆದಿದ್ದು, ಡಿಸೆಂಬರ್ 1 ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ನಿಗದಿಪಡಿಸಲಾಗಿದೆ. ಸದ್ಯಕ್ಕೆ ರಾಹುಲ್ ಗಾಂಧಿ ಅವಿರೋಧವಾಗಿ ಆಯ್ಕೆಯಾಗುವುದು ಖಚಿತ ಎಂದು ಹೇಳಲಾಗಿದೆ.ಹಾಗಿದ್ದರೂ ರಾಹುಲ್ ಹೊರತಾಗಿ ಯಾರಾದರೂ ನಾಮಪತ್ರ ಸಲ್ಲಿಸಿದರೆ, ಡಿಸೆಂಬರ್ 8 ರಂದು ಚುನಾವಣೆ ನಡೆಯಲಿದೆ.