ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯಲ್ಲಿ ಶನಿವಾರ ಮಧ್ಯರಾತ್ರಿ ಭೀಕರ ಅಪಘಾತ ನಡೆದಿದೆ. ಈ ದುರಂತದಲ್ಲಿ 18 ಮಂದಿ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹವನ್ನು ಹೊತ್ತೊಯ್ಯುವ ವಾಹನದಲ್ಲಿ ಸುಮಾರು 20 ಜನರು ಉತ್ತರ 24 ಪರಗಣದ ಬಾಗ್ಡಾದಿಂದ ನವದ್ವೀಪದ ಸ್ಮಶಾನದ ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ. ಈ ಮೃತದೇಹವನ್ನು ಹೊತ್ತ ವಾಹನವು ರಸ್ತೆ ಬದಿಯಲ್ಲಿದ್ದ ಟ್ರಕ್ವೊಂದಕ್ಕೆ ಡಿಕ್ಕಿ ಹೊಡೆದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.