ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ಹಾಗೂ ಬಿಜೆಪಿ ಮಧ್ಯೆ ವಾಕ್ ಸಮರ ತಾರಕಕ್ಕೇರಿದೆ. ಬಿಜೆಪಿ ಜತೆಗೆ ಮೈತ್ರಿ ಮುಂದುವರಿಸಬೇಕೆ ಅಥವಾ ಬೇಡವೇ ಎಂಬುದನ್ನು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ನಿರ್ಧರಿಸಬೇಕು ಎಂದು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಇದರ ಮಧ್ಯೆ ಬಿಜೆಪಿ ಶಿವಸೇನೆ ಜತೆ ಮೈತ್ರಿ ಮುರಿದುಕೊಂಡರೆ, ಬೇರೆ ಯಾವ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳಲಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ನಿನ್ನೆ ಶಿವಸೇನೆ ವಿಚಾರವಾಗಿ ಮಾತನಾಡುತ್ತಿದ್ದ ಸಿಎಂ ದೇವೇಂದ್ರ ಫಡ್ನವೀಸ್,