ನವದೆಹಲಿ: ವಿಚಾರವಾದಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರ್ ಎಸ್ ಎಸ್ ಕೈವಾಡವಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಸಿಪಿಎಂ ಧುರೀಣ ಸೀತಾರಾಂ ಯಚೂರಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ.ಆರ್ ಎಸ್ಎಸ್ ಕಾರ್ಯಕರ್ತ, ನ್ಯಾಯವಾದಿ ಧ್ರಿತುಮಾನ್ ಜೋಶಿ ಇಬ್ಬರು ನಾಯಕರ ವಿರುದ್ಧ ಮುಂಬೈನ ಸ್ಥಳೀಯ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ವಿಚಾರವಾಗಿ ಅ. 22 ರಂದು ವಿಚಾರಣೆ ನಡೆಯುವ ಸಾಧ್ಯತೆಯಿದೆ.ಇವರಲ್ಲದೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ