ನವದೆಹಲಿ: ಕೇಂದ್ರ ಸರ್ಕಾರ ಹೊಸದಾಗಿ ಆಕ್ಸಿಜನ್ ಘಟಕ ತಯಾರಿಸಿ, ವಿದೇಶಗಳಿಂದ ಆಮದು ಮಾಡಿಕೊಂಡು ಏನೇನೋ ವ್ಯವಸ್ಥೆ ಮಾಡಿದರೂ ದೆಹಲಿಯ ಆಸ್ಪತ್ರೆಯಲ್ಲಿ ಮತ್ತೆ ಆಕ್ಸಿಜನ್ ಕೊರತೆ ಕಂಡುಬಂದಿದೆ. ಈ ವಿಚಾರವಾಗಿ ದೆಹಲಿ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ದೆಹಲಿಯ ಶಾಂತಿ ನಿಕೇತನ್ ಆಸ್ಪತ್ರೆ ಈ ಸಂಬಂಧವಾಗಿ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ನಮಗೆ ಮತ್ತೆ ಆಕ್ಸಿಜನ್ ಪೂರೈಕೆಯಾಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದೆ. ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ದೆಹಲಿ ಸರ್ಕಾರವನ್ನು