ಫಿರೋಝಾಬಾದ್, ಸೆ. 26 : ನಿಗೂಢ ಜ್ವರ ಹಾಗೂ ಡೆಂಗ್ಯೂ ಜ್ವರದಿಂದಾಗಿ ಉತ್ತರಪ್ರದೇಶದಲ್ಲಿ ಸಾವನ್ನಪ್ಪಿದವರ ಸಂಖ್ಯೆ 63ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಶನಿವಾರ ಹೇಳಿದ್ದಾರೆ. ಇಲ್ಲಿನ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ರಾತ್ರಿ ಚಿಕಿತ್ಸೆ ಪಡೆಯುತ್ತಿದ್ದ 12 ವರ್ಷದ ಬಾಲಕಿಯೋರ್ವಳು ಮೃತಪಟ್ಟಿದ್ದಾಳೆ ಎಂದು ಸರಕಾರದ ಹೇಳಿಕೆ ತಿಳಿಸಿದೆ. ವೈದ್ಯಕೀಯ ಕಾಲೇಜು ಆಸ್ಪತ್ರೆಯ ವಿವಿಧ ವಾರ್ಡ್ಗಳಲ್ಲಿ 225ಕ್ಕೂ ಅಧಿಕ ರೋಗಿಗಳನ್ನು ದಾಖಲಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 154ಕ್ಕೂ ಅಧಿಕ ರೋಗಿಗಳನ್ನು ದಾಖಲಿಸಲಾಗಿದೆ.ಯಶಸ್ವಿ ಚಿಕಿತ್ಸೆ