ನವದೆಹಲಿ: ಭಾರತೀಯ ಸೇನೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಇದು ನಿಜವೇ? ನಿಜವಾಗಿ ನಡೆದಿದ್ದೇನು? ಭಾರತ ಮತ್ತು ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ಉಗ್ರರ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿತ್ತು. ಸುಮಾರು 70 ಕಮಾಂಡೋಗಳು ಗಡಿಯಲ್ಲಿ ಬುಧವಾರ ಮುಂಜಾನೆ ಹಲವು ಉಗ್ರರನ್ನು ಹೊಡೆದುರುಳಿಸಿದ್ದರು.ಈ ಹಿನ್ನಲೆಯಲ್ಲಿ ಇದನ್ನು ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ಎಂದೇ ಹೇಳಲಾಗಿತ್ತು. ಆದರೆ ಭಾರತೀಯ ಸೇನೆ ಇದನ್ನು ಸರ್ಜಿಕಲ್ ಸ್ಟ್ರೈಕ್