ನವದೆಹಲಿ : ದೇಶದಲ್ಲಿ ನಡೆಯುವ ಮೋಸದ ಧಾರ್ಮಿಕ ಮತಾಂತರಗಳನ್ನು ತಡೆಯಲು ಕ್ರಮಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕರ್ನಾಟಕ ಮೂಲದ ಜೆರೋಮ್ ಆಂಟೊ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿ ಸದಸ್ಯ ಪೀಠ, ನ್ಯಾಯಾಲಯವು ಈ ವಿಷಯಕ್ಕೆ ಯಾಕೆ ಪ್ರವೇಶಿಸಬೇಕು? ನ್ಯಾಯಾಲಯವು ಸರ್ಕಾರಕ್ಕೆ ನಿರ್ದೇಶನ ಹೇಗೆ ನೀಡಬಹುದು?