ದೆಹಲಿ-ದೆಹಲಿಯಲ್ಲಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಮಾತಿನ ನಂತರ ಕಲಾಪ ಅಂತ್ಯಗೊಳಿಸಿ,ರಾಜ್ಯದ ಪರ ಸುರೇಶ್ ಅವರ ಧ್ವನಿ ಎತ್ತಲು ಅವಕಾಶ ಕೊಡದೆ ಅನ್ಯಾಯ ಮಾಡಲಾಗಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ರಾಜ್ಯದ ಪರವಾಗಿ ಮಾತನಾಡದೆ ಪಕ್ಷಪಾತಿಯಾಗಿ ಮಾತನಾಡುತ್ತಿದ್ದರು. ನಮ್ಮ ಪಕ್ಷದ ಎಲ್ಲಾ ಮಂತ್ರಿಗಳು, ಶಾಸಕರು, ಸಂಸದರು ದೆಹಲಿಗೆ ಬಂದು ರಾಜ್ಯದ ಪರ ದನಿ ಎತ್ತಿದರು. ಈ ಬಗ್ಗೆ ಬಿಜೆಪಿ ಎಂಪಿಗಳಿಗೆ ನಾಚಿಕೆಯಾಗಬೇಕು.