ತಮಿಳುನಾಡಿನ ಡಿಎಂಕೆ ಪಕ್ಷದ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿಗೆ 94ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಸಾವಿರಾರು ಸಂಖ್ಯೆಯಲ್ಲಿ ಡಿಎಂಕೆ ಪಕ್ಷದ ನಾಯಕರು , ಕಾರ್ಯಕರ್ತರು ಅವರ ನಿವಾಸಕ್ಕೆ ಆಗಮಿಸಿ ಶುಭಕೋರಿದ್ದಾರೆ. ಕರುಣಾನಿಧಿಯವರ ಜನ್ಮದಿನದೊಂದಿಗೆ ತಮಿಳುನಾಡು ವಿಧಾನಸಭೆ ಪ್ರವೇಶಿಸಿ 50 ವರ್ಷಗಳಾದ ಸಂಭ್ರಮ ಕೂಡಾ ಡಿಎಂಕೆ ಪಕ್ಷದ ಕಾರ್ಯಕರ್ತರು ಆಚರಿಸುತ್ತಿದ್ದಾರೆ. ಏತನ್ಮಧ್ಯೆ, ವೈದ್ಯರ ಸಲಹೆ ಮೇರೆಗೆ ಅನಾರೋಗ್ಯದಿಂದಾಗಿ ಕರುಣಾನಿಧಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.