ಅಮರಾವತಿ : ಪತ್ನಿ ಹಾಗೂ ತನ್ನ ಬಣ್ಣ ಬಿಳಿಯದ್ದಾಗಿದ್ದರೂ ಮಗುವಿನ ಬಣ್ಣ ಮಾತ್ರ ಏಕೆ ಕಪ್ಪಾಗಿದೆ ಎಂದು ಪತ್ನಿಯ ಶೀಲ ಶಂಕಿಸಿ ಪತಿ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ.ಒಡಿಶಾದ ಉಮ್ಮರ್ಕೋಟ್ನ ಸಿಲಾಟಿಗಾಂವ್ ಗ್ರಾಮದ ಮಾಣಿಕ್ ಘೋಷ್ ಇಂತಹದ್ದೊಂದು ಕೃತ್ಯ ಎಸಗಿದ್ದಾನೆ. ಈತನ ಕೃತ್ಯಕ್ಕೆ ಬಲಿಯಾದವರು ಕರಗಾಂವ್ ಗ್ರಾಮದ ಲಿಪಿಕಾ ಮಂಡಲ್.ಮೊದಲು ಸಹಜ ಸಾವು ಎಂದೇ ಬಿಂಬಿತವಾಗಿದ್ದ ಈ ಸಾವಿನ ಪ್ರಕರಣ ನಂತರದಲ್ಲಿ ಕೊಲೆ