ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿದ್ದರು. ಇದಾಗಿ ಎರಡು ವಾರ ಕಳೆಯುವ ಮೊದಲೇ ರಾಮ ಜನ್ಮಭೂಮಿಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಕೆಲಸ ಶುರುವಾಗಿದೆ. ಮುಂದಿನ 40 ತಿಂಗಳ ಅವಧಿಯೊಳಗಾಗಿ ರಾಮ ಮಂದಿರ ನಿರ್ಮಾಣಗೊಳ್ಳಲಿದೆ. ತಾಂತ್ರಿಕತೆ ಹಾಗೂ ಸಾಂಪ್ರದಾಯಿಕ ವಿಧಾನ ಅನುಸರಿಸಿ ರಾಮ ಮಂದಿರ ನಿರ್ಮಾಣವಾಗಲಿದ್ದು, ಈ ಕಟ್ಟಡ ಸಾವಿರಾರು ವರ್ಷ ಬಾಳಿಕೆ ಬರುವಂತೆ ನಿರ್ಮಾಣ ಮಾಡುತ್ತಿರುವುದು ವಿಶೇಷ.