ಹೈದರಾಬಾದ್ : ಅತ್ಯಾಚಾರ ಮಾಡಲು ಬಂದ ಕಾಮುಕನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಕ್ಕೆ ಬಾಲಕಿಯೊಬ್ಬಳ ಮೇಲೆ ಹಲ್ಲೆ ಮಾಡಿ ಪಾಳು ಬಿದ್ದ ಬಾವಿಗೆ ಎಸೆದ ಘಟನೆ ತೆಲಂಗಾಣದ ಜಂಗಾಂವ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಬಾಲಕಿಯ ಪೋಷಕರು ಹೊರಗಡೆ ಹೋಗುವುದನ್ನೇ ಕಾಯುತ್ತಿದ್ದ ಕಾಮುಕನೊಬ್ಬ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿಕೊಂಡು ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಮುಂದಾಗಿದ್ದಾನೆ. ಆಗ ಬಾಲಕಿ ಆತನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾಳೆ. ಆಗ ಕೋಪಗೊಂಡ ಆತ ಆಕೆಯ ಮೇಲೆ ಹಲ್ಲೆ ಮಾಡಿ ನೀರಿಲ್ಲದ ಪಾಳು