ತಿರುವನಂತಪುರಂ : ಹೊಸಬರೊಂದಿಗೆ ಲೈಂಗಿಕ ಕ್ರಿಯೆ ನಡೆಸುವ ಉದ್ದೇಶದಿಂದ ಪತ್ನಿಯರನ್ನೇ ವಿನಿಮಯ ಮಾಡಿಕೊಳ್ಳಲು ಯತ್ನಿಸಿದ್ದ ನಾಲ್ವರು ಪತಿಮಹಾಶಯರನ್ನು ಪೊಲೀಸರು ಬಂಧಿಸಿದ ಘಟನೆ ಕೇರಳದ ಕಾಯಂಕುಳಂ ಟೌನ್ ವ್ಯಾಪ್ತಿಯಲ್ಲಿ ನಡೆದಿದೆ. ಬ್ಲೆಸರಿನ್, ಕಿರಣ್, ಸೀಡಿ, ಉಮೇಶ್ ಎಂಬವರು ಬಂಧಿತ ಆರೋಪಿಗಳಾಗಿದ್ದು, ಇವರು ತಮ್ಮ ಕಾಮತೃಷೆಯನ್ನು ತೀರಿಸಿಕೊಳ್ಳಲು ಪತ್ನಿಯರ ಮನವೊಲಿಸಲು ಮುಂದಾಗಿದ್ದಾರೆ. ಆದರೆ ಅವರಲ್ಲಿ ಒಬ್ಬ ಮಹಿಳೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಒಪ್ಪಿಕೊಳ್ಳುವಂತೆ ಬಲವಂತ ಮಾಡಿದ ಹಿನ್ನೆಲೆಯಲ್ಲಿ ಆಕೆ ಸ್ಥಳೀಯ ಪೊಲೀಸರಿಗೆ ದೂರು